==="सभी लोगों के लिए अच्छी खबर" -(हिंदी,বাঙালি,తెలుగు,मराठी,தமிழ்,اردو,ગુજરાતી,ಕನ್ನಡ,മലയാളം,ଓଡ଼ିଆ,ਪੰਜਾਬੀ,Ôxômiya,etc.)-संख्या से सर्वाधिक बोली जाने वाली भाषाओं (१-१२) भारत में // (Hindi,,Bengali,Telugu,Marathi,Tamil,Urdu,Gujarati,Kannada,Malayalam,O
«
»
[7]. ગુજરાતી ખ્રિસ્તી ગીત - "પ્રેમ ઇસુનો છે અવિનાશી"(prem isuno chhe avinashi).mp4
Manage episode 213799605 series 1329830
[7]. Gujarati Christian Song - "Jesus' Love is Unfailing".mp4 //
ಯೊವಾನ್ನ 1 - ದಿವ್ಯವಾಣಿ
1ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; 2ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು.
3ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.
4ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.
5ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.
6ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ.
7ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ
ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.
8ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು.
9ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.
10ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆಹೋಯಿತು.
11ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.
12ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.
13ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.
14ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.
15ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, “ ‘ಅವರು ನನ್ನ ಬಳಿಗೆ ಬಂದವರಾದರೂ. ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು’. ಎಂದು ನಾನು ಹೇಳಿದ್ದು ಅವರನ್ನು ಕುರಿತೇ,” ಎಂದು ಘೋಷಿಸಿದನು.
16ಅವರ ಪರಿಪೂರ್ಣತೆಯಿಂದ ನಾವೆಲ್ಲರು. ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.
17ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ. ಯೇಸು ಕ್ರಿಸ್ತರ ಮುಖಾಂತರ ಬಂದವು.
18ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ. ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.
67 에피소드